ಸಿಗರೇಟ್ ಮಾರಾಟಕ್ಕೆ ಸಂಬಂಧಿಸಿದಂತೆ ಕೆಲವು ನಿಷೇಧಗಳು ಮತ್ತು ನಿರ್ಬಂಧಗಳಿವೆ. ಇದು ಕಾನೂನುಬಾಹಿರವಾಗಿದೆ 6 :
18 ವರ್ಷದೊಳಗಿನ ಜನರಿಗೆ ಸಿಗರೇಟ್ ಅಥವಾ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದು
ಯಾವುದೇ ಶಿಕ್ಷಣ ಸಂಸ್ಥೆಯ 100 ಗಜಗಳ ಒಳಗೆ ಸಿಗರೇಟ್ ಅಥವಾ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು
ನೀವು ಅಪ್ರಾಪ್ತ ವಯಸ್ಕರಿಗೆ (18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ) ಸಿಗರೇಟ್ ಮಾರಾಟ ಮಾಡುವಾಗ ಸಿಕ್ಕಿಬಿದ್ದರೆ, ಒಬ್ಬ ಪೊಲೀಸ್ ಅಧಿಕಾರಿಯು ನಿಮ್ಮನ್ನು ಬಂಧಿಸಿ 24 ಗಂಟೆಗಳಲ್ಲಿ ಮ್ಯಾಜಿಸ್ಟ್ರೇಟ್ ಗೆ ಕರೆದೊಯ್ಯಬಹುದು. ಇದಕ್ಕಾಗಿ ನಿಮಗೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಒಂದು ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸಲಾಗುತ್ತದೆ.
